ಬೆಂಗಳೂರು: ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ ಪ್ರತಿಯೊಬ್ಬ ವ್ಯಕ್ತಿಗೂ ಸಹಕಾರಿ ಸಂಘಗಳಲ್ಲಿ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಇದಕ್ಕೆ ತಗಲುವುದು ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪರಿಶಿಷ್ಟ ಜಾತಿ ಉಪ ಯೋಜನೆ(SCSP) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆ(TSP) ಅನುಷ್ಠಾನ ಕುರಿತಾಗಿ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ನಡೆಸಿದ ಸಚಿವರು ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ಎಲ್ಲರಿಗೂ ಸದಸ್ಯತ್ವ ನೀಡಬೇಕೆಂಬುದು ಸರ್ಕಾರದ ಚಿಂತನೆಯಾಗಿದೆ. ರಾಜ್ಯದಲ್ಲಿ 1.4 ಕೋಟಿಯಷ್ಟು ಪರಿಶಿಷ್ಟ ಸಮುದಾಯದವರಿದ್ದಾರೆ. ಅವರನ್ನು ಸಹಕಾರ ಸಂಘಗಳಲ್ಲಿ ನೋಂದಣಿ ಮಾಡಿಸುವುದರಿಂದ ಸಮುದಾಯದವರಿಗೆ ಅನುಕೂಲವಾಗಲಿದೆ. ಸದಸ್ಯತ್ವ ನೋಂದಣಿ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಹೇಳಿದ್ದಾರೆ.