ಬೆಂಗಳೂರು: ಪರಿಶಿಷ್ಟ ಸಮುದಾಯದ ಉಪಜಾತಿಗಳಿಗೆ ಒಳ ಮೀಸಲಾತಿ ಬೇಡಿಕೆ ಈಡೇರಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಪರಿಶೀಲನೆ ನಡೆಸಿ ಸೂಕ್ತ ಶಿಫಾರಸು ಮಾಡಲು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಉಪ ಸಮಿತಿ ರಚಿಸಿ ಆದೇಶ ಹೊರಡಿಸಲಾಗಿದೆ.
ಈ ಸಮಿತಿಯಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ಎಸ್. ಅಂಗಾರ, ಪ್ರಭು ಚೌಹಾಣ್, ಡಾ.ಕೆ. ಸುಧಾಕರ್ ಸದಸ್ಯರಾಗಿದ್ದಾರೆ.
ಪರಿಶಿಷ್ಟರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದೆ. ಪರಿಶಿಷ್ಟ ಜಾತಿಯ ಮೀಸಲಾತಿ ಶೇಕಡ 15 ರಿಂದ ಶೇಕಡ 17ಕ್ಕೆ, ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡ 3ರಿಂದ ಶೇಕಡ 7ಕ್ಕೆ ಏರಿಕೆ ಮಾಡಲಾಗಿದೆ.
ಶೇಕಡ 18 ರಿಂದ ಶೇಕಡ 24ಕ್ಕೆ ಏರಿಕೆ ಮಾಡಲಾದ ಪರಿಶಿಷ್ಟ ಮೀಸಲಾತಿಯನ್ನು ವರ್ಗೀಕರಿಸಿ ಉಪಜಾತಿಗಳಿಗೆ ಮೀಸಲಾತಿ ಪ್ರಮಾಣ ನಿಗದಿಪಡಿಸುವ ಕುರಿತು ಸಂಪುಟ ಉಪ ಸಮಿತಿ ಪರಿಶೀಲನೆ ನಡೆಸಲಿದೆ.