ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿದ್ಯಾರ್ಥಿವೇತನ ಘೋಷಣೆ ಮಾಡಲಾಗಿದೆ.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಮೋಹನ್ ಆಳ್ವ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಈ ಬಾರಿ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಎರಡು ವರ್ಷಕ್ಕೆ 10 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿದ್ಯಾರ್ಥಿ ವೇತನ ಘೋಷಿಸಲಾಗಿದೆ. ಮಾರ್ಚ್ 31 ಮತ್ತು ಏಪ್ರಿಲ್ 14 ರಂದು ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ.
10ನೇ ತರಗತಿಯಲ್ಲಿ ಸಿಬಿಎಸ್ಇ, ಐಸಿಎಸ್ಇ ಹಾಗೂ ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನ ಪರೀಕ್ಷೆಗೆ ಅರ್ಜಿ ಸಲ್ಲಿಸಬಹುದಾಗಿದೆ. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರು ಆಳ್ವಾಸ್ ವಿಜ್ಞಾನ, ವಾಣಿಜ್ಯ ಅಥವಾ ಕಲಾವಿಭಾಗದಲ್ಲಿ ಪದವಿ ಪೂರ್ವ ಶಿಕ್ಷಣ ಪಡೆಯಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದ್ದಾರೆ.
https://scholarship.Alva’s.org/PUC/login.php ವೆಬ್ಸೈಟ್ ಮೂಲಕವೂ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಶೈಕ್ಷಣಿಕ ವಿದ್ಯಾರ್ಥಿ ವೇತನ ಪ್ರವೇಶ ಪರೀಕ್ಷೆಯ ಅಂಕದ ಆಧಾರದ ಮೇಲೆ ಆಯ್ಕೆಯ ಜೊತೆ ಪ್ರತ್ಯೇಕವಾಗಿ ಪ್ರತಿ ವರ್ಷದಂತೆ ಎಸ್.ಎಸ್.ಎಲ್.ಸಿ. ಪರೀಕ್ಷೆ ಅಂಕಗಳನ್ನು ಪರಿಗಣಿಸಿ ಕ್ರೀಡೆ ಹಾಗೂ ಸಾಂಸ್ಕೃತಿಕ ವಿಭಾಗದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.