
ಬೆಳಗಾವಿ: ಎಲ್ಲಾ ಹಂತದ ವಿದ್ಯಾರ್ಥಿ ವೇತನಗಳು ಮುಂದುವರೆಯಲಿವೆ. ಯಾವ ವಿದ್ಯಾರ್ಥಿ ವೇತನಗಳನ್ನೂ ಸ್ಥಗಿತಗೊಳಿಸಿಲ್ಲ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಕಲಾಪದಲ್ಲಿ ಸದಸ್ಯ ಮರಿತಿಬ್ಬೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಒಂದರಿಂದ ಎಂಟನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ವಿದ್ಯಾರ್ಥಿವೇತನ ನೀಡಲಿದೆ. ನಂತರದ ತರಗತಿಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿದ್ಯಾರ್ಥಿವೇತನ ಭರಿಸುತ್ತವೆ. ಪರಿಶಿಷ್ಟ ವರ್ಗದ ಮತ್ತು ಒಬಿಸಿ ಮಕ್ಕಳಿಗೆ ವಿದ್ಯಾರ್ಥಿ ವೇತನ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆ. ಎಲ್ಲಾ ಹಂತದ ವಿದ್ಯಾರ್ಥಿ ವೇತನಗಳು ಮುಂದುವರಿಯಲಿದ್ದು, ಯಾವುದೂ ಸ್ಥಗಿತವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ವರ್ಷ ಹಣದ ಕೊರತೆಯಾಗಿರಬಹುದು. ಆದರೆ, ಯಾವ ವಿದ್ಯಾರ್ಥಿ ವೇತನವನ್ನು ಸ್ಥಗಿತ ಮಾಡುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.