alex Certify ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿಯನ್ನು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1, ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿ ಅ.31 ಕಡೆಯ ದಿನವಾಗಿ ನಿಗದಿಪಡಿಸಲಾಗಿತ್ತು. ಪೋಷಕರು /ವಿದ್ಯಾರ್ಥಿಗಳ /ಶಿಕ್ಷಣ ಸಂಸ್ಥೆಗಳ ಮನವಿ ಮೇರೆಗೆ ಅರ್ಜಿ ಸಲ್ಲಿಕೆ ಅವಧಿಯನ್ನು ನ.30 ರವರೆಗೆ ವಿಸ್ತರಿಸಲಾಗಿದೆ.

ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಮತ್ತು ಹೆಚ್ಚಿನ ಮಾಹಿತಿಗೆ www.bcwd.karnataka.gov.in ವೆಬ್‍ಸೈಟ್ ಹಾಗೂ ಸಹಾಯವಾಣಿ 8050770005/8050770004 ಹಾಗೂ ದೂರವಾಣಿ ಸಂಖ್ಯೆ 080-35254757 ನ್ನು ಸಂಪರ್ಕಿಸಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...