alex Certify ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಪ್ರೋತ್ಸಾಹಧನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಥಮ ದರ್ಜೆಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ 35 ಸಾವಿರ ರೂ. ಪ್ರೋತ್ಸಾಹಧನ

ಬೆಂಗಳೂರು: ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಪಬ್ಲಿಕ್ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿರುವ ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ಅರ್ಹ ಪರಿಶಿಷ್ಟ ವರ್ಗಗಳ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪದವಿ(Degree) ವಿದ್ಯಾರ್ಥಿಗಳಿಗೆ 25,000 ರೂ.ಗಳು, ಪದವಿ ನಂತರದ ಕೋರ್ಸ್‌ಗಳಾದ ಎಂ.ಎ, ಎಂ.ಎಸ್ಸಿ, ಎಂ.ಕಾಂ, ಎಂ.ಬಿ.ಎ, ಎಂ.ಸಿ.ಎ, ಎಂ.ಎಫ್.ಎ ಇತ್ಯಾದಿ (Post Graduate Course like MA, M.sc, Mcom, MBA, MCA, MFA etc.,) ವಿದ್ಯಾರ್ಥಿಗಳಿಗೆ 30,000 ರೂ.ಗಳು, ಅಗ್ರಿಕಲ್ಚರ್/ ಎಂಜಿನಿಯರಿಂಗ್/ ಮೆಡಿಸಿನ್/ವೆಟರ್ನರಿ(Agriculture/Engineering/Medicine/ Vetrinary) ವಿದ್ಯಾರ್ಥಿಗಳಿಗೆ 35,000 ರೂ.ಗಳನ್ನು ಪ್ರೋತ್ಸಾಹಧನವಾಗಿ ನೀಡಲಾಗುವುದು.

ಅರ್ಹ ಹಾಗೂ ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.tw.kar.nic.in ನಲ್ಲಿ 2021ರ ಅಕ್ಟೋಬರ್ 31 ರೊಳಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸಿದ ನಂತರ ವಿದ್ಯಾರ್ಥಿಗಳು ತಾವು ವ್ಯಾಸಂಗ ಮಾಡಿರುವ ಕೋರ್ಸ್‌ ಗಳ ದೃಡೀಕೃತ ದಾಖಲಾತಿಗಳನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ: 205, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ಸಲ್ಲಿಸುವುದು.   ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 080-29787448 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...