ಮಡಿಕೇರಿ: ಭಾರತೀಯ ಅಂಚೆ ಇಲಾಖೆ 6 ನೇ ತರಗತಿಯಿಂದ 9 ನೇ ತರಗತಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳಿಂದ “ದೀನ್ ದಯಾಳ್ ಸ್ಪರ್ಶ್ ಯೋಜನೆ” ಯ ಅಡಿಯಲ್ಲಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನಿಸಿದೆ.
ಸ್ಪರ್ಶ್ ಎಂದರೆ(Scholarship for Promotion of Aptitude and Research in Stamps as Hobby) ಸ್ಟ್ಯಾಂಪ್‍ಗಳಲ್ಲಿ ಅಭಿರುಚಿ ಮತ್ತು ಸಂಶೋಧನೆಯನ್ನು ಹವ್ಯಾಸವಾಗಿ ಉತ್ತೇಜಿಸಲು ವಿದ್ಯಾರ್ಥಿ ವೇತನ, ಶೈಕ್ಷಣಿಕ ಪಠ್ಯಕ್ರಮ ಬಲಪಡಿಸಲು ಮತ್ತು ಪೂರಕವಾಗಿ ಸಮರ್ಥನೀಯ ರೀತಿಯಲ್ಲಿ, ಚಿಕ್ಕ ವಯಸ್ಸಿನ ಮಕ್ಕಳಲ್ಲಿ ಅಂಚೆ ಚೀಟಿಗಳ ಸಂಗ್ರಹಕ್ಕೆ ಉತ್ತೇಜಿಸುವುದು ವಿದ್ಯಾರ್ಥಿ ವೇತನದ ಉದ್ದೇಶವಾಗಿದೆ.
ಈ ಹವ್ಯಾಸವು ಅವರಿಗೆ ವಿಶ್ರಾಂತಿ ಮತ್ತು ಒತ್ತಡ ನಿವಾರಿಸಲು ಸಹಾಯ ಮಾಡುತ್ತದೆ. ಈ ಯೋಜನೆಯಡಿ, 2021-22 ಶೈಕ್ಷಣಿಕ ವರ್ಷದಲ್ಲಿ ಶೇ.60 ಅಂಕಗಳನ್ನು ಹೊಂದಿರುವ ಮತ್ತು ಅಂಚೆ ಚೀಟಿಗಳ ಸಂಗ್ರಹದ ಠೇವಣಿ ಖಾತೆ/ ಫಿಲಾಟೆಲಿಕ್ ಕ್ಲಬ್‍ನ ಸದಸ್ಯರು ಮತ್ತು ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರಿಸುವ 6 ನೇ ತರಗತಿಯಿಂದ 9 ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ 6 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ(ಲಿಖಿತ) ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಅಂಚೆ ಇಲಾಖೆಯು ನೀಡುವ ಅಂಚೆ ಚೀಟಿಗಳ ಸಂಗ್ರಹ ಯೋಜನೆಯಲ್ಲಿ ಯಶಸ್ವಿಯಾಗಿ ಸ್ಪರ್ಧಿಸಬೇಕಿದೆ.
ಕರ್ನಾಟಕ ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಲೆವೆಲ್ 1- ಅಂಚೆ ಚೀಟಿಗಳ ಸಂಗ್ರಹದ ರಸಪ್ರಶ್ನೆ(ಲಿಖಿತ) ನಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸಲು/ ಪೋಸ್ಟಿಂಗ್ ಮಾಡಲು ಸೆಪ್ಟೆಂಬರ್ 26 ಕೊನೆಯ ದಿನವಾಗಿದೆ. ಕರ್ನಾಟಕದ ಎಲ್ಲಾ ಶಾಲೆಗಳು ತಮ್ಮ ವಿದ್ಯಾರ್ಥಿಗಳನ್ನು ಸ್ಕಾಲರ್‍ಶಿಪ್ ಯೋಜನೆಯಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಲು ವಿನಂತಿಸಲಾಗಿದೆ. www.indiapost.gov.in ಮತ್ತು www.karnatakapost.gov.in ಗೆ ಮಾಹಿತಿ ಪಡೆಯಬಹುದಾಗಿದೆ ಎಂದು ಅಂಚೆ ಅಧೀಕ್ಷಕರು ತಿಳಿಸಿದ್ದಾರೆ.