ಬೆಂಗಳೂರು: ಅಂಚೆ ಇಲಾಖೆ ದೀನ ದಯಾಳ್ ಸ್ಪರ್ಶ್ ಯೋಜನೆಯಡಿ ವಿದ್ಯಾರ್ಥಿ ವೇತನ ನೀಡಲಿದೆ. ವಿದ್ಯಾರ್ಥಿಗಳಲ್ಲಿ ಅಂಚೆ ಚೀಟಿ ಸಂಗ್ರಹ ಬಗ್ಗೆ ಆಸಕ್ತಿ ಬೆಳೆಸುವ ಉದ್ದೇಶದಿಂದ ಯೋಜನೆ ಪ್ರಾರಂಭಿಸಲಾಗಿದೆ.
ಅಂಚೆ ಇಲಾಖೆ ವತಿಯಿಂದ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ದೀನ ದಯಾಳ್ ಸ್ಪರ್ಶ್ ಯೋಜನೆ ಅಡಿ ವಿದ್ಯಾರ್ಥಿ ವೇತನ ನೀಡಲಾಗುವುದು. ಅಂಚೆ ಚೀಟಿ ಸಂಗ್ರಹವನ್ನು ಹವ್ಯಾಸವಾಗಿ ಮುಂದುವರೆಸಲು ಇಚ್ಚಿಸುವ 6ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಕರ್ನಾಟಕ ಸರ್ಕಲ್ ಮಟ್ಟದಲ್ಲಿ ಅಂಚೆ ಚೀಟಿಗಳ ರಸಪ್ರಶ್ನೆ, ಅಂಚೆ ಚೀಟಿ ಸಂಗ್ರಹ ಸ್ಪರ್ಧೆ ನಡೆಸಲಾಗುವುದು. ಇದರ ಆಧಾರದಲ್ಲಿ 2023 -24ನೇ ಸಾಲಿಗೆ ವಾರ್ಷಿಕ 6,000 ರೂ. ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಹೇಳಲಾಗಿದೆ.