
ಬೆಂಗಳೂರು: ವಿದ್ಯಾರ್ಥಿ ವೇತನವನ್ನು ನೇರವಾಗಿ ವಿದ್ಯಾರ್ಥಿಗಳ ಆಧಾರ್ ಜೋಡಣೆಯ ಬ್ಯಾಂಕ್ ಖಾತೆಗೆ ಜಮಾ ಮಾಡಲು ಏಕೀಕೃತ ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದೆ.
ಇ – ಆಡಳಿತ ಇಲಾಖೆಯ ವತಿಯಿಂದ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ವಿದ್ಯಾರ್ಥಿಗಳ ಆಧಾರ್ ಜೋಡಣೆಯಾದ ಬ್ಯಾಂಕ್ ಖಾತೆಗೆ ಜಮಾ ಮಾಡಲು ಏಕೀಕೃತ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅಭಿವೃದ್ಧಿಪಡಿಸಿರುವುದಾಗಿ. ಇ-ಆಡಳಿತ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೀವ್ ಚಾವ್ಲಾ ತಿಳಿಸಿದ್ದಾರೆ.
ವಿದ್ಯಾರ್ಥಿವೇತನಕ್ಕೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ ಅಭಿವೃದ್ಧಿಪಡಿಸಿದ ಮೊದಲ ರಾಜ್ಯ ಕರ್ನಾಟಕವಾಗಿದೆ. ಸಂಪೂರ್ಣ ಆನ್ಲೈನ್ ವ್ಯವಸ್ಥೆಯಾಗಿರುವ ಈ ತಂತ್ರಾಂಶದಲ್ಲಿ ನಕಲಿ ಮತ್ತು ಬೇರೆ ಫಲಾನುಭವಿಗಳಿಗೆ ಹಣ ಪಾವತಿಸಲು ಅವಕಾಶವಿಲ್ಲ. ನೇರವಾಗಿ, ವಿದ್ಯಾರ್ಥಿಗಳ ಖಾತೆಗೆ ಹಣ ಜಮಾ ಮಾಡಲಾಗುತ್ತದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ಗಳು ವಿದ್ಯಾರ್ಥಿವೇತನಕ್ಕಾಗಿ https://SSP.karnataka.gov.in ಗಮನಿಸಬಹುದು.
ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ https://ssp.postmatric.karnataka.gov.in ಲಾಗಿನ್ ಆಗಬೇಕಿದೆ. ವಿದ್ಯಾರ್ಥಿಗಳ ಹೆಸರು, ಆಧಾರ್ ಸಂಖ್ಯೆ, ಎಸ್ಎಟಿಎಸ್ ಗುರುತು, ಜಾತಿ ಆದಾಯ ಪ್ರಮಾಣ ಪತ್ರದ ಆರ್.ಡಿ. ಸಂಖ್ಯೆ ಸಲ್ಲಿಸಬೇಕಿದೆ ಎಂದು ಹೇಳಲಾಗಿದೆ.