ಬೆಂಗಳೂರು: ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸ್ಸಿನ ಆಧಾರದ ಮೇಲೆ ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಒಂದನೇ ತರಗತಿ ಪ್ರವೇಶಕ್ಕೆ 2025- 26 ನೇ ಸಾಲಿನಿಂದ ಆರು ವರ್ಷ ಕಡ್ಡಾಯಗೊಳಿಸಲಾಗಿದೆ. ವಯೋಮಿತಿ ಸಡಿಲಿಕೆ ಮಾಡುವಂತೆ ಅನೇಕ ಪೋಷಕರು ಮನವಿ ಮಾಡಿದ್ದು, ರಾಜ್ಯ ಶಿಕ್ಷಣ ನೀತಿ ಆಯೋಗದ ವರದಿಯ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ರಾಷ್ಟ್ರೀಯ ಶಿಕ್ಷಣ ನೀತಿಯ ಭಾಗವಾಗಿ ಶಾಲಾ ಪ್ರವೇಶದ ವಯೋಮಿತಿಯನ್ನು ಹಿಂದಿನ ಸರ್ಕಾರ ಆರು ವರ್ಷಕ್ಕೆ ನಿಗದಿಪಡಿಸಿದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಎನ್ಇಪಿ ರದ್ದು ಭರವಸೆ ನೀಡಿದಂತೆ ಕ್ರಮ ಕೈಗೊಂಡಿದ್ದೇವೆ. ಪೋಷಕರು ಮಕ್ಕಳ ಶಾಲಾ ಪ್ರವೇಶದ ವಯೋಮಿತಿ ಸಡಿಲಿಕೆ ಮಾಡುವಂತೆ ಮಾಡಿದ ಮನವಿಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗದ ಗಮನಕ್ಕೆ ತರಲಾಗಿದೆ ಎಂದು ಹೇಳಿದ್ದಾರೆ.