ಮೈಸೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 6ನೇ ತರಗತಿಗೆ ದಾಖಲಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
2021-22ನೇ ಸಾಲಿನಲ್ಲಿ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಇಂದಿರಾ ಗಾಂಧಿ ವಸತಿ ಶಾಲೆಗಳಲ್ಲಿ 6ನೇ ತರಗತಿಯ ದಾಖಲಾತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಆಸಕ್ತಿಯುಳ್ಳವರು 2021 ಜುಲೈ 28 ರಿಂದ ಆಗಸ್ಟ್ 10 ರವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಸೆಪ್ಟೆಂಬರ್ 4 ರಿಂದ ಸೆಪ್ಟೆಂಬರ್ 15 ರವರೆಗೆ ಪ್ರವೇಶ ಪತ್ರವನ್ನು http://kreis.kar.nic.in ಹಾಗೂ http://kea.kar.nic.in ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪರೀಕ್ಷೆಯು ಸೆಪ್ಟೆಂಬರ್ 16 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟವರ್ಗದ ವಿದ್ಯಾರ್ಥಿಗಳಿಗೆ ವಾರ್ಷಿಕ ಆದಾಯದ ಮಿತಿ 2.5 ಲಕ್ಷ ರೂ ಗಳು, ಹಿಂದುಳಿದ ವರ್ಗ-1 ವಿದ್ಯಾರ್ಥಿಗಳಿಗೆ 2.5 ಲಕ್ಷ ರೂ ಗಳು, ಹಿಂದುಳಿದ ವರ್ಗ 2ಎ, 2ಬಿ, 3ಎ, 3ಬಿ ವಿದ್ಯಾರ್ಥಿಗಳಿಗೆ 1 ಲಕ್ಷ ರೂ. ಗಳ ಆದಾಯದ ಮಿತಿಯಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.