alex Certify ಪೋಷಕರಿಗೆ ಮುಖ್ಯ ಮಾಹಿತಿ: ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೋಷಕರಿಗೆ ಮುಖ್ಯ ಮಾಹಿತಿ: ಮಿಲಿಟರಿ ಶಾಲೆಯಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ

ಕಲಬುರಗಿ: ಉತ್ತರಾಖಂಡದ ಡೆಹರಾಡೂನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ ಪ್ರವೇಶ ಪರೀಕ್ಷೆ ಮೂಲಕ 8ನೇ ತರಗತಿ ಪ್ರವೇಶ ಪಡೆಯಲು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರಾಜ್ಯದ ಬಾಲಕ ಮತ್ತು ಬಾಲಕಿಯರಿಗೆ ಬೆಂಗಳೂರಿನ ಕೇಂದ್ರದಲ್ಲಿ 2023ರ ಜೂನ್ 3 ರಂದು ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ. ಅಭ್ಯರ್ಥಿಗಳು ಯಾವುದೇ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 01/01/2024ರಂತೆ 11 ವರ್ಷದಿಂದ 13 ವರ್ಷದೊಳಗಿರುವ(ಅಂದರೆ ದಿನಾಂಕ 02/01/2011 ರಿಂದ 01/07/2012 ರೊಳಗೆ ಜನಿಸಿರುವ) ಬಾಲಕ ಮತ್ತು ಬಾಲಕಿಯರು ಮಾತ್ರ ಸದರಿ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ನಿಗದಿತ ಅರ್ಜಿ ನಮೂನೆಗಳನ್ನು ಪ್ರಾಸ್ಪಕ್ಟಸ್ ಕಮ್ ಅರ್ಜಿ ನಮೂನೆ ಮತ್ತು ಹಳೆಯ ಪ್ರಶ್ನೆ ಪತ್ರಿಕೆಗಳ ಕಿರು ಪುಸ್ತಕವನ್ನು ರಾಷ್ಟ್ರೀಯ ಭಾರತೀಯ ಮಿಲಿಟರಿ ಕಾಲೇಜು, ಗರಹಿ ಕ್ಯಾಂಟ್, ಡೆಹ್ರಾಡೂನ್, ಉತ್ತರಾಖಂಡ, ಪಿನ್-248003 ದಿಂದ ಅಥವಾ   www.rimc.gov.in  ವೆಬ್‍ಸೈಟ್‍ದಿಂದ ಪಡೆಯಬಹುದಾಗಿದೆ.

ನಿಗದಿತ ನಮೂನೆಯನ್ನು ಭರ್ತಿ ಮಾಡಿದ ಅರ್ಜಿಯೊಂದಿಗೆ ದ್ವಿಪ್ರತಿಯಲ್ಲಿ ಅವಶ್ಯಕ ದಾಖಲಾತಿಗಳನ್ನು ಲಗತ್ತಿಸಿ 2023ರ ಏಪ್ರಿಲ್ 15 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುರ್ನವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ಭವನ್, ನಂ.58 ಫೀಲ್ಡ್ ಮಾರ್ಷಲ್ ಕೆ.ಎಮ್.ಕಾರ್ಯಪ್ಪ ರಸ್ತೆ, ಬೆಂಗಳೂರು-25 ಈ ವಿಳಾಸಕ್ಕೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-25589459ಗೆ ಸಂಪರ್ಕಿಸಲು ಕೋರಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...