
ಕೋಲಾರ: ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಯಲುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿ ಸ್ವಚ್ಛತಾ ಕಾರ್ಯ ಕೈಗೊಂಡ ಘಟನೆ ಬೆಳಕಿಗೆ ಬರುತ್ತಿದ್ದಂತೆ ನಾಲ್ವರನ್ನು ಅಮಾನತು ಮಾಡಲಾಗಿದೆ.
ಶಾಲೆಯ ಪ್ರಾಂಶುಪಾಲ ಸೇರಿ ಇಬ್ಬರನ್ನು ಬಂಧಿಸಲಾಗಿದ್ದು, ಮತ್ತಿಬ್ಬರು ನಾಪತ್ತೆಯಾಗಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಲೆಯ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕ ಮುನಿಯಪ್ಪ, ಅತಿಥಿ ಶಿಕ್ಷಕ ಅಭಿಷೇಕ್, ವಾರ್ಡನ್ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ, ಪೊಲೀಸರು ಭಾರತಮ್ಮ ಮತ್ತು ಮುನಿಯಪ್ಪ ಅವರನ್ನು ಬಂಧಿಸಿದ್ದಾರೆ.