ಬೆಂಗಳೂರು: ಶಾಲಾ ಮಕ್ಕಳ ಬ್ಯಾಗ್ ಹೊರೆ ಕಡಿಮೆ ಮಾಡಲು ಈಗಾಗಲೇ ಹಲವು ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಬ್ಯಾಗ್ ರಹಿತ ದಿನವನ್ನಾಗಿ ಮಾಡಲಾಗುತ್ತಿದೆ. ಇದರೊಂದಿಗೆ ನೋಟ್ ಪುಸ್ತಕಗಳ ಪ್ರಮಾಣ ಕಡಿಮೆ ಮಾಡಲು ಬಹು ವಿಷಯಗಳಿಗೆ ಒಂದೇ ನೋಟ್ ಪುಸ್ತಕ ಅಥವಾ ನೋಟ್ ಶೀಟ್ ಗಳನ್ನು ಪರಿಚಯಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನ ಉಚಿತವಾಗಿ ಮೊಟ್ಟೆ ನೀಡುವ ಕಾರ್ಯಕ್ರಮ ಆರಂಭಿಸಿದ್ದು, ಇದುವರೆಗೆ ಸರ್ಕಾರದಿಂದ ಎರಡು ದಿನ ಮಾತ್ರ ಮೊಟ್ಟೆ ನೀಡಲಾಗುತ್ತಿತ್ತು. ಅಜೀಂ ಪ್ರೇಮ್ ಜೀ ಫೌಂಡೇಶನ್ ಸಹಯೋಗದಲ್ಲಿ ವಾರದ ಆರು ದಿನಗಳ ಕಾಲ ಮೊಟ್ಟೆ ನೀಡಲಾಗುವುದು ಎಂದು ಹೇಳಿದ್ದಾರೆ.