alex Certify BIG BEWS: 1 ರಿಂದ 8 ನೇ ತರಗತಿ ಆರಂಭಿಸಲು ಆಗಸ್ಟ್ 30 ರ ಸಭೆಯಲ್ಲಿ ನಿರ್ಧಾರ; ಸಚಿವ ನಾಗೇಶ್ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BEWS: 1 ರಿಂದ 8 ನೇ ತರಗತಿ ಆರಂಭಿಸಲು ಆಗಸ್ಟ್ 30 ರ ಸಭೆಯಲ್ಲಿ ನಿರ್ಧಾರ; ಸಚಿವ ನಾಗೇಶ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಒಂದರಿಂದ ಎಂಟನೇ ತರಗತಿ ಮಕ್ಕಳಿಗೆ ಭೌತಿಕ ತರಗತಿ ಆರಂಭಿಸುವ ಕುರಿತಾಗಿ ಆಗಸ್ಟ್ 30 ರಂದು ನಡೆಯುವ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು.

ಕಿತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಆಗಸ್ಟ್ 30 ರಂದು ಕೋವಿಡ್ ಕಾರ್ಯಪಡೆ ಸಭೆ ನಡೆಯಲಿದ್ದು, ಸಭೆಯಲ್ಲಿ ಒಂದರಿಂದ ಎಂಟನೇ ತರಗತಿ ಆರಂಭಿಸುವುದರ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಸೋಮವಾರದಿಂದ 9 ರಿಂದ 12 ನೇ ತರಗತಿ ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ. ತಜ್ಞರ ಸಮಿತಿ ಕೂಡ ಪ್ರಾಥಮಿಕ ಹಂತದಿಂದಲೇ ಶಾಲೆ ಆರಂಭಿಸಲು ವರದಿ ನೀಡಿದೆ. ಇದೆಲ್ಲವನ್ನು ಆಧರಿಸಿ 1 ರಿಂದ 8 ನೇ ತರಗತಿಯನ್ನು ಕೂಡ ಆರಂಭಿಸುವ ಕುರಿತಾಗಿ ಆಗಸ್ಟ್ 30 ರ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...