
ವಿಜಯಪುರ: ಅಂಗನವಾಡಿ ಬಾಲಕನ ಮೇಲೆ ಖಾಸಗಿ ಶಾಲಾ ಬಸ್ ಹರಿದು ಹೋದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಅರಳದಿನ್ನಿ ಗ್ರಾಮದಲ್ಲಿ ನಡೆದಿದೆ.
5 ವರ್ಷದ ಬಾಲಕನ ಮೇಲೆ ಶಾಲಾ ಬಸ್ ಹರಿದು ದುರಂತ ಸಂಭವಿಸಿದೆ. ಬಾಲಕ ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ. ಈ ವೇಳೆ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಖಾಸಗಿ ಶಾಲೆಯ ಬಸ್ ಬಾಲಕನಿಗೆ ಡಿಕ್ಕಿ ಹೊಡೆದು, ಬಾಲಕನ ಮೇಲೆಯೇ ಹರಿದು ಹೋಗಿದೆ. ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಶಾಲಾ ಬಸ್ ಚಾಲಕನ ಅಜಾಗರೂಕತೆಯೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.