alex Certify ಸರ್ಕಾರಿ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಶಾಲಾ ವಾಹನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆ ಮಕ್ಕಳಿಗೆ ಸಿಹಿ ಸುದ್ದಿ: ಮನೆ ಬಾಗಿಲಿಗೆ ಶಾಲಾ ವಾಹನ

ಬೆಂಗಳೂರು: ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರುವ ವಾಹನಗಳ ಖರೀದಿಗೆ ಅನುಕೂಲವಾಗುವಂತೆ ಶಾಸಕರ ಪ್ರದೇಶ ಅಭಿವೃದ್ಧಿ ನಿಯಮಕ್ಕೆ ಸರ್ಕಾರ ತಿದ್ದುಪಡಿ ತಂದಿದೆ.

ಖಾಸಗಿ ಶಾಲೆಗಳು ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಂತೆ ಸರ್ಕಾರಿ ಶಾಲೆಗಳಿಗೆ ಕೂಡ ಮಕ್ಕಳನ್ನು ಕರೆತರಲು ವಾಹನಗಳಿದ್ದರೆ ಅನುಕೂಲವಾಗುತ್ತದೆ. ಆದರೆ, ಶಾಸಕರ ನಿಧಿಯಲ್ಲಿ ವಾಹನ ಖರೀದಿಸಲು ಅವಕಾಶ ಇರಲಿಲ್ಲ. ಈಗ ನಿಯಮಕ್ಕೆ ತಿದ್ದುಪಡಿ ತರಲಾಗಿದೆ.

ಶಾಸಕರ ಪ್ರದೇಶ ಅಭಿವೃದ್ಧಿ ನಿಯಮಕ್ಕೆ ತಿದ್ದುಪಡಿ ತಂದಿದ್ದು, ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ಕರೆತರಲು ವಾಹನ ಖರೀದಿಸಬಹುದು. ಚಾಲಕರ ವೇತನ, ಇಂಧನ ಮತ್ತು ದುರಸ್ತಿ ವೆಚ್ಚಗಳನ್ನು ಶಾಲಾ ಮೇಲುಸ್ತುವಾರಿ ಸಮಿತಿಗಳಲ್ಲಿ ಭರಿಸಬೇಕೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...