ರಾಮನಗರ: ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕಿನ ಪಿಚ್ಚನಕೆರೆ ಬಳಿ ಶಾಲಾ ಬಸ್ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ(6) ಮೃತಪಟ್ಟ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಶ್ರೀ ಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ವಿದ್ಯಾರ್ಥಿನಿಯಾಗಿರುವ ರಕ್ಷಿತಾ ನಿನ್ನೆ ಶಾಲೆ ಮುಗಿಸಿ ಬಸ್ ನಲ್ಲಿ ಬರುವ ವೇಳೆ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.