ರಾಮನಗರ: ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿ 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಮನಗರ ಜಿಲ್ಲೆಯ ಬೇಲೂರು ತಾಲೂಕಿನ ನಿಡಗೋಡು ಗ್ರಾಮದಲ್ಲಿ ನಡೆದಿದೆ.
ರಾಮನಗರದ ಸರ್ಕಾರಿ ಪ್ರೌಢಶಾಲೆಯಿಂದ ಎರಡು ಬಸ್ ಗಳಲ್ಲಿ ಒಟ್ಟು 71 ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಪ್ರವಾಸಕ್ಕೆ ತೆರಳಿದ್ದರು. ಇದರಲ್ಲಿ ಒಂದು ಬಸ್ ಚಾಲಕನ ನಿಯಂತ್ರನ ತಪ್ಪಿ ನಿಡಗೋಡು ಗ್ರಾಮದ ಬಳಿ ಪಲ್ಟಿಯಾಗಿದೆ. ನಾಲ್ವರು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ಸೇರಿ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಬೇಲೂರು ಹಾಗೂ ಹಾಸನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.