alex Certify ಒಮಿಕ್ರಾನ್ ಆತಂಕದ ಹೊತ್ತಲ್ಲೇ ಕೊರೋನಾ ಸ್ಪೋಟ, ವಿದ್ಯಾರ್ಥಿಗಳು ಸೇರಿ ವಸತಿ ಶಾಲೆಯ 40 ಜನರಿಗೆ ಸೋಂಕು ದೃಢ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಆತಂಕದ ಹೊತ್ತಲ್ಲೇ ಕೊರೋನಾ ಸ್ಪೋಟ, ವಿದ್ಯಾರ್ಥಿಗಳು ಸೇರಿ ವಸತಿ ಶಾಲೆಯ 40 ಜನರಿಗೆ ಸೋಂಕು ದೃಢ

ಚಿಕ್ಕಮಗಳೂರು: ಸಿಗೋಡು ಜವಾಹರ ನವೋದಯ ವಿದ್ಯಾಲಯದಲ್ಲಿ ಕೊರೋನಾ ಸ್ಪೋಟವಾಗಿದೆ. ವಸತಿ ಶಾಲೆಯಲ್ಲಿರುವ 40 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನ ಸಿಗೋಡು ಗ್ರಾಮದ ಬಳಿಯಿರುವ ಜವಾಹರ್ ನವೋದಯ ವಿದ್ಯಾಲಯ ಸೀಲ್ ಡೌನ್ ಮಾಡಲಾಗಿದೆ. ಮೂವರು ವಿದ್ಯಾರ್ಥಿಗಳು, ನಾಲ್ವರು ಸಿಬ್ಬಂದಿಗೆ ಕೊರೋನಾ ಹಿನ್ನೆಲೆಯಲ್ಲಿ ವಸತಿ ಶಾಲೆಯಲ್ಲಿದ್ದ 418 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಪರೀಕ್ಷೆ ನಡೆಸಲಾಗಿದ್ದು, ಇವರಲ್ಲಿ 40 ಜನರಿಗೆ ಕೊರೋನಾ ಧೃಡಪಟ್ಟಿದೆ. ಸೋಂಕಿತ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗೆ ಯಾವುದೇ ಲಕ್ಷಣಗಳಿಲ್ಲ. ವಸತಿ ಶಾಲೆಯನ್ನು ಸೀಲ್ ಡೌನ್ ಮಾಡಲಾಗಿದೆ. ಶಾಲೆಗೆ ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...