
ಬೆಂಗಳೂರು: ಆರು ವರ್ಷ ಪೂರ್ಣಗೊಂಡ ಮಗುವಿಗೆ ಶಾಲಾ ದಾಖಲಾತಿ ಕಡ್ಡಾಯವಾಗಿದೆ. 6 ವರ್ಷದ ಮಗುವನ್ನು ಒಂದನೇ ತರಗತಿಗೆ ದಾಖಲಿಸುವುದು ಕಡ್ಡಾಯವಾಗಿದೆ.
ಶಿಕ್ಷಣ ಇಲಾಖೆಯಿಂದ ವಯೋಮಿತಿ ನಿಗದಿಪಡಿಸಿ ಆದೇಶ ಹೊರಡಿಸಲಾಗಿದೆ. ಶೈಕ್ಷಣಿಕ ವರ್ಷ ಜೂನ್ ಒಂದರಿಂದ ಶಾಲಾ ದಾಖಲಾತಿ ಪ್ರಕ್ರಿಯೆ ಶುರುವಾಗಲಿದೆ. 2025 – 26ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ನಿಯಮ ಜಾರಿ ಮಾಡಲಾಗಿದೆ ಎಂದು ಹೇಳಲಾಗಿದೆ.