ಹಾವೇರಿ: ಏಪ್ರಿಲ್ ಒಳಗೆ ಶಿಗ್ಗಾಂವಿ ಕ್ಷೇತ್ರದ ಪ್ರತಿ ಮನೆಗೂ ನೀರಿನ ಸೌಲಭ್ಯ ಕಲ್ಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಬಾಡ ಗ್ರಾಮದಲ್ಲಿ ಮಾತನಾಡಿದ ಅವರು, ಅಸಾಧ್ಯವನ್ನು ಸಾಧ್ಯ ಮಾಡುವುದೇ ನಮ್ಮ ಮೋದಿಯವರು. 70 ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ 20 ಲಕ್ಷ ಮನೆಗೆ ನೀರು ಕೊಟ್ಟಿತ್ತು. ಆದರೆ, ಮೋದಿ ಸರ್ಕಾರ ಎರಡು ವರ್ಷದಲ್ಲಿ 30 ಲಕ್ಷ ಮನೆಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದೆ ಎಂದರು.
ನೆಲ, ಜಲದ ವಿಷಯದಲ್ಲಿ ಕೇಂದ್ರ ಸಚಿವ ಜೋಶಿ ಸಮರ್ಥವಾಗಿ ಕೆಲಸ ಮಾಡುತ್ತಿದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ ಇನ್ನೂ 10 ಯೋಜನೆಗಳನ್ನು ರೂಪಿಸುತ್ತೇನೆ. ಡಿಸೆಂಬರ್ 31 ರೊಳಗೆ ಮಳೆಯಿಂದ ಮನೆ ಹಾನಿಯಾದವರಿಗೆ ಪರಿಹಾರ ನೀಡಲಾಗುವುದು. ಶಾಲಾ ಮಕ್ಕಳಿಗೆ ಪ್ರತ್ಯೇಕ ಬಸ್ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಕರ್ನಾಟಕದಲ್ಲಿ ನನ್ನ ಕ್ಷೇತ್ರದಿಂದಲೇ ಪ್ರಯೋಗ ಮಾಡುತ್ತೇನೆ. ಮುಂದಿನ ಏಪ್ರಿಲ್ ತಿಂಗಳೊಳಗೆ ಎಲ್ಲ ರಸ್ತೆ ಕಾಮಗಾರಿ ಪೂರ್ಣಗೊಳಿಸಲಾಗುವುದು. ಬಾಡ ಗ್ರಾಮದ ಅಭಿವೃದ್ಧಿಗೆ ಒಂದು ಕೋಟಿ ರೂಪಾಯಿ ಮಂಜೂರು ಮಾಡಲಾಗಿದೆ. ನಾನು ಮೃತಪಟ್ಟಲ್ಲಿ ಇದೇ ಮಣ್ಣಲ್ಲಿ ಮಣ್ಣಾಗಬೇಕು ಸ್ವಕ್ಷೇತ್ರದ ಜನರ ಮುಂದೆ ಸಿಎಂ ಭಾವುಕ ಮಾತುಗಳನ್ನಾಡಿದ್ದಾರೆ.