alex Certify ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಖಾಸಗಿ ಶಾಲೆಗೆ ಮಕ್ಕಳನ್ನು ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್

ಬಳ್ಳಾರಿ: ಸಮಾಜ ಕಲ್ಯಾಣ ಇಲಾಖೆಯಿಂದ 2022-23ನೇ ಸಾಲಿಗೆ 5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಪಡೆದಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ 6ನೇ ತರಗತಿಗೆ ಖಾಸಗಿ ಶಾಲೆಗಳಲ್ಲಿ ಅರ್ಹತಾ ಪರೀಕ್ಷೆಯ ಮೂಲಕ ಪ್ರವೇಶ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಯಾ ತಾಲೂಕಿನ ಸಹಾಯಕ ನಿರ್ದೇಶಕರ ಕಚೇರಿಗಳಿಂದ ಅರ್ಜಿ ಪಡೆದು, ಮೇ 31 ರೊಳಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಡಯಟ್ ಮೂಲಕ ಪ್ರವೇಶ ಪರೀಕ್ಷೆ ಜೂ.5 ಆಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂ.08392-267932 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...