
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಸೆಪ್ಟಂಬರ್ ತಿಂಗಳಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ ಆರು ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನಿಡಘಟ್ಟ ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಭೇಟಿ ನೀಡಿ, ಶಾಲೆಯಲ್ಲಿನ ಮೂಲ ಸೌಕರ್ಯಗಳು, ಸ್ವಚ್ಛತೆ ಹಾಗೂ ಮಕ್ಕಳ ಹಾಜರಾತಿ ಬಗ್ಗೆ ಪರಿಶೀಲನೆ ನಡೆಸಿ, ವಿದ್ಯಾರ್ಥಿಗಳ ಕುಂದುಕೊರತೆಗಳನ್ನು ಆಲಿಸಿದರು.
ಬಳಿಕ ಮಕ್ಕಳ ಜೊತೆ ಮಧ್ಯಾಹ್ನದ ಬಿಸಿ ಊಟ ಸವಿದು ಆಹಾರದ ಗುಣಮಟ್ಟ ಪರಿಶೀಲಿಸಿ. ನಂತರ ಶಾಲೆಯ ಆಡಳಿತ ಮಂಡಳಿಯವರಿಗೆ ಆಹಾರದ ಗುಣಮಟ್ಟ ಕಾಪಾಡಿಕೊಂಡು ಹೋಗುವಂತೆ ಸೂಚಿಸಿ, ಅಡುಗೆ ಸಿಬ್ಬಂದಿಗಳಿಗೆ ಅಭಿನಂದನೆ ತಿಳಿಸಿದರು.
ಈ ವೇಳೆ ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಕೆ.ಎಂ. ಕದಲೂರು, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರವಿಕುಮಾರ್(ಗಾಣಿಗ) ಉಪಸ್ಥಿತರಿದ್ದರು.
