ಕೊಪ್ಪಳ: ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
2022-23ನೇ ಸಾಲಿಗೆ ಸಂಬAಧಿಸಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ 6ನೇ ತರಗತಿ ಪ್ರವೇಶಕ್ಕೆ ಅಗತ್ಯವಾದ ಪ್ರವೇಶ ಪರೀಕ್ಷೆ ಮತ್ತು ಆನ್‌ಲೈನ್ ಕೌನ್ಸೆಲಿಂಗ್‌ನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಸಲಾಗುವುದು. ಮಾರ್ಚ್ 20 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
5 ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳ ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ಕೊಪ್ಪಳ ಜಿಲ್ಲೆಯ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳು, ಶ್ರೀಮತಿ ಇಂದಿರಾಗಾAಧಿ ವಸತಿ ಶಾಲೆ ಸೇರಿದಂತೆ ಜಿಲ್ಲೆಯ 28 ವಸತಿ ಶಾಲೆಗಳಿಗೆ ವಿದ್ಯಾರ್ಥಿಗಳ ದಾಖಲಾತಿಗಾಗಿ ಆಯಾ ವಸತಿ ಶಾಲೆಗಳನ್ನು ಸಂಪರ್ಕಿಸಿ ಆನ್‌ಲೈನ್ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಫೆ.22 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸುವ ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗದ ಹಾಗೂ ಹಿಂದುಳಿದ ವರ್ಗದ ಪ್ರವರ್ಗ-1 ಕ್ಕೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಮಿತಿ 2,50,000 ರೂ./ ಮತ್ತು ಹಿಂದುಳಿದ ವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ವಿದ್ಯಾರ್ಥಿಯ ಕುಟುಂಬದ ವಾರ್ಷಿಕ ಆದಾಯ ಮಿತಿ 1 ಲಕ್ಷ ರೂ. ಒಳಗಿರಬೇಕು.
ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕಾ ಪ್ರವೇಶ ಪರೀಕ್ಷಾ ಮುಖ್ಯಸ್ಥರಾದ ಕೊಪ್ಪಳ ತಾಲ್ಲೂಕಿನ ಹಿರೇಕಾಸನಕಂಡಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಚಾರ್ಯರಾದ ಮಂಜುನಾಥ ಬೇಳೂರು, ಮೊ.ಸಂ: 7892498264, ಯಲಬುರ್ಗಾ ತಾಲ್ಲೂಕಿನ ಬಳೂಟಗಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಿದ್ದಲಿಂಗಪ್ಪ ತಳವಾರ ಮೊ.ಸಂ: 7829956092, ಕುಷ್ಟಗಿ ತಾಲ್ಲೂಕಿನ ಕಾಟಾಪುರದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಭಾರಿ ಪ್ರಚಾರ್ಯರಾದ ಗುರುಬಸಪ್ಪ ಮೊ.ಸಂ: 9739504313, ಗಂಗಾವತಿ ತಾಲ್ಲೂಕಿನ ಮಲಕನಮರಡಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಚಾರ್ಯರಾದ ಅಮೀನ್‌ಸಾಬ್ ಮೊ.ಸಂ: 9481660459 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಜಿ.ಎಂ.ದೊಡ್ಡಮನಿ ತಿಳಿಸಿದ್ದಾರೆ.