ಬೆಂಗಳೂರು: ಶಾಲೆ ಆರಂಭಕ್ಕೆ ಮೊದಲೇ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಬೇಕೆಂದು ತಜ್ಞರ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸರ್ಕಾರ ಶಾಲಾ ಮಕ್ಕಳಿಗೆ ಆರೋಗ್ಯ ವಿಮೆ ಸೌಲಭ್ಯ ಕಲ್ಪಿಸಲು ಮುಂದಾಗಿದೆ ಎನ್ನಲಾಗಿದೆ.
ಡಾ. ದೇವಿಶೆಟ್ಟಿ ನೇತೃತ್ವದ ತಜ್ಞರ ಸಮಿತಿ, ಶಾಲೆ ಆರಂಭಿಸುವ ಕುರಿತು ನೀಡಿದ ಸಲಹೆಯಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೆ ಆರೋಗ್ಯ ವಿಮೆ ಹೊಂದಿರಬೇಕೆಂದು ಸಲಹೆ ನೀಡಿದ್ದು, ಇದನ್ನು ಆಧರಿಸಿ ಸರ್ಕಾರ ಮತ್ತು ಖಾಸಗಿ ಶಾಲೆಗಳ ಮಕ್ಕಳಿಗೆ ಆರೋಗ್ಯವಿಮೆ ಕಲ್ಪಿಸಲು ಮುಂದಾಗಿವೆ.
ಶಾಲೆಯ ಆರಂಭದ ಕುರಿತಾಗಿ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಎಲ್ಲಾ ಮಕ್ಕಳಿಗೆ ಆರೋಗ್ಯ ವಿಮೆ ಕಲ್ಪಿಸಬೇಕೆಂಬ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಕನಿಷ್ಠ 2 ಲಕ್ಷ ರೂಪಾಯಿ ಮೌಲ್ಯದ ಆರೋಗ್ಯವಿಮೆ ಮಾಡಿಸಬೇಕೆಂಬ ತಜ್ಞರ ಸಲಹೆಯನ್ನು ಪರಿಗಣಿಸಲಾಗಿದೆ ಎನ್ನಲಾಗಿದೆ.