ಬೆಂಗಳೂರು: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿದ್ದು, ಮಕ್ಕಳು ಶಾಲೆಗೆ ಬಂದು ಪಾಠ ಕೇಳುತ್ತಿದ್ದಾರೆ. ಇದರೊಂದಿಗೆ ಒಂದರಿಂದ ಐದನೇ ತರಗತಿಗಳನ್ನು ಕೂಡ ಆರಂಭಿಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.
ಒಂದರಿಂದ ಐದನೇ ತರಗತಿಯನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಅನುಮತಿ ಕೇಳಿ ಶಿಕ್ಷಣ ಇಲಾಖೆಯಿಂದ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಸರ್ಕಾರಿ ಶಾಲೆಯ ಒಂದರಿಂದ ಐದನೇ ತರಗತಿ ಮಕ್ಕಳಿಗೆ ‘ನಲಿಯುತ್ತಾ ಕಲಿಯೋಣ’ ರೇಡಿಯೋ ಪಾಠ ಹೊರತಾಗಿ ಯಾವುದೇ ರೀತಿಯಲ್ಲಿ ಕಲಿಕೆ ಬೋಧನೆ ನಡೆಯುತ್ತಿಲ್ಲ. ಆದರೆ, ಖಾಸಗಿ ಶಾಲೆಗಳಲ್ಲಿ ಆನ್ಲೈನ್ ತರಗತಿ, ಮುದ್ರಿತ ವಿಡಿಯೋ ತರಗತಿಗಳನ್ನು ನಡೆಸಲಾಗುತ್ತಿದೆ. ಸರ್ಕಾರಿ ಶಾಲೆ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯ ದೃಷ್ಟಿಯಿಂದ ಒಂದರಿಂದ ಐದನೇ ತರಗತಿ ಆರಂಭಿಸಲು ಅನುಮತಿ ನೀಡಬೇಕೆಂದು ಮನವಿ ಮಾಡಿ ಪತ್ರ ಬರೆಯಲಾಗಿದೆ ಎಂದು ಹೇಳಲಾಗಿದೆ.