alex Certify ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಸತಿ ಶಾಲೆಯಲ್ಲಿ 25ಕ್ಕೂ ಹೆಚ್ಚು ಮಕ್ಕಳು ಅಸ್ಪಸ್ಥ: ಐವರ ಸ್ಥಿತಿ ಗಂಭೀರ

ದಾವಣಗೆರೆ: ವಸತಿ ಶಾಲೆಯಲ್ಲಿ ಊಟ ಮಾಡಿದ ಬಳಿಕ 25 ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಐವರ ಸ್ಥಿತಿ ಗಂಭೀರವಾಗಿದೆ. ಹೆಚ್ಚಿನ ಚಿಕಿತ್ಸೆಗೆ ಮಕ್ಕಳನ್ನು ದಾವಣಗೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು ಸಮೀಪದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ. ಮಧ್ಯಾಹ್ನ ಊಟ ಮಾಡುತ್ತಿದ್ದಂತೆ 25ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿದ್ದು, ಅವರಿಗೆ ಸಂತೆಬೆನ್ನೂರು ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಿ ಗಂಭೀರವಾಗಿ ಅಸ್ವಸ್ಥರಾದ ಐವರು ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಸ್ವಚ್ಛತೆ ಕಾಪಾಡದೆ ಮಕ್ಕಳಿಗೆ ಆಹಾರ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ವಸತಿ ಶಾಲೆ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಮಕ್ಕಳ ಪೋಷಕರು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...