ಶಾಲಾ ಮಕ್ಕಳಿಗೆ ಸಿಹಿ ಸುದ್ದಿ: ಪಠ್ಯಪುಸ್ತಕ, 2 ಜತೆ ಸಮವಸ್ತ್ರ ವಿತರಣೆಗೆ ರೆಡಿ

ಬೆಂಗಳೂರು: ಶಾಲೆ ಆರಂಭವಾಗಿ ತಿಂಗಳುಗಳೇ ಕಳೆದರೂ ಪಠ್ಯ ಪುಸ್ತಕ ಸಮವಸ್ತ್ರ ವಿತರಣೆ ಪ್ರತಿ ವರ್ಷ ವಿಳಂಬವಾಗುತ್ತಿತ್ತು. ಆದರೆ, ಈ ಬಾರಿ ಅಚ್ಚರಿ ಎನ್ನುವಂತೆ ಶಾಲೆ ಆರಂಭಕ್ಕೂ ಮೊದಲೇ ಸರ್ಕಾರ ಪಠ್ಯಪುಸ್ತಕ, ಸಮವಸ್ತ್ರ ವಿತರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದೆ.

ಈಗಾಗಲೇ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ತಲುಪಿಸಲಾಗಿದ್ದು, ಶಾಲೆ ಆರಂಭವಾದ ಕೂಡಲೇ ಮಕ್ಕಳಿಗೆ ವಿತರಿಸಲಾಗುವುದು. ಇನ್ನು ಪ್ರಾಥಮಿಕ ವಿದ್ಯಾರ್ಥಿನಿಯರಿಗೆ ಚೂಡಿದಾರ್ ಸಮವಸ್ತ್ರ ಕೂಡ ವಿತರಿಸಲಾಗುತ್ತದೆ. ಪ್ರತಿ ವರ್ಷ ಒಂದು ಜತೆ ಸಮವಸ್ತ್ರವನ್ನು ವಿದ್ಯಾರ್ಥಿಗಳಿಗೆ ನೀಡುತ್ತಿದ್ದು, ಈ ವರ್ಷ ಎರಡು ಜೊತೆ ಸಮವಸ್ತ್ರವನ್ನು ಏಕಕಾಲಕ್ಕೆ ನೀಡಲಾಗುವುದು.

8, 10ನೇ ತರಗತಿ ವಿದ್ಯಾರ್ಥಿನಿಯರಿಗೆ ಮಾತ್ರ ಚೂಡಿದಾರ್ ನೀಡಲಾಗುತ್ತಿತ್ತು. ಸರ್ಕಾರದ ಆದೇಶದ ಅನ್ವಯ ಈ ವರ್ಷದಿಂದ ಆರು ಮತ್ತು ಏಳನೇ ತರಗತಿಯ ವಿದ್ಯಾರ್ಥಿನಿಯರಿಗೂ ಚೂಡಿದಾರ್ ನೀಡಲಿದ್ದು, ಈಗಾಗಲೇ ಸಮವಸ್ತ್ರಗಳನ್ನು ಪೂರೈಕೆ ಮಾಡಲಾಗಿದೆ. ಬಹುತೇಕ ಶಾಲೆಗಳಿಗೆ ಪಠ್ಯಪುಸ್ತಕಗಳನ್ನು ಪೂರೈಕೆ ಮಾಡಲಾಗಿದ್ದು, ಇನ್ನು ಕೆಲವೇ ದಿನಗಳಲ್ಲಿ ಪೂರ್ಣ ಪ್ರಮಾಣದ ಪುಸ್ತಕಗಳು ಪೂರೈಕೆಯಾಗಲಿವೆ. ಶಾಲೆ ಆರಂಭವಾದ ಕೂಡಲೇ ಮಕ್ಕಳ ಕೈ ಸೇರಲಿವೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read