ಬೆಂಗಳೂರು: 2023 -24ನೇ ಶೈಕ್ಷಣಿಕ ಸಾಲಿನ ಶಾಲಾ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಕಟಿಸಿದೆ.
ಮೇ 29 ರಿಂದ ತರಗತಿಗಳು ಆರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಏಕರೂಪದ ಶೈಕ್ಷಣಿಕ ಮಾರ್ಗಸೂಚಿ ಅನುಷ್ಠಾನಗೊಳಿಸಲು ಶಿಕ್ಷಣ ಇಲಾಖೆ ಆಯುಕ್ತರು ಸೂಚನೆ ನೀಡಿದ್ದಾರೆ. ಮೇ 29 ರಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ತರಗತಿಗಳು ಆರಂಭವಾಗಲಿವೆ.