alex Certify ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ: ಇಂದಿನಿಂದ ಮೂರು ದಿನ ಪ್ರೌಢಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ಸಂಘರ್ಷದ ಹಿನ್ನೆಲೆಯಲ್ಲಿ ಪ್ರೌಢಶಾಲೆ ಮತ್ತು ಕಾಲೇಜುಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ರಜೆ ಘೋಷಿಸಲಾಗಿದೆ. ಒಂದರಿಂದ ಎಂಟನೇ ತರಗತಿ, ವೈದ್ಯಕೀಯ, ನರ್ಸಿಂಗ್ ಕಾಲೇಜುಗಳು ಮತ್ತು ಪರೀಕ್ಷೆಗಳು ಎಂದಿನಂತೆ ನಡೆಯಲಿವೆ.

9, 10ನೇ ತರಗತಿ, ಪದವಿ ಪೂರ್ವ ಕಾಲೇಜು, ಎಲ್ಲ ವಿಶ್ವವಿದ್ಯಾಲಯಗಳು, ಅವುಗಳ ಸಂಯೋಜಿತ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್ ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಶಾಲಾ, ಕಾಲೇಜುಗಳಿಗೆ ರಜೆ ಇದ್ದರೂ ನಿಗದಿಯಾಗಿರುವ ಪರೀಕ್ಷೆಗಳು ಯಥಾವತ್ತಾಗಿ ನಡೆಯಲಿವೆ.

ಒಂದರಿಂದ ಎಂಟನೇ ತರಗತಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಸೇರಿದಂತೆ ಅದರ ಸಂಯೋಜಿತ ವೈದ್ಯಕೀಯ, ದಂತವೈದ್ಯಕೀಯ ಹಾಗೂ ನರ್ಸಿಂಗ್ ಕಾಲೇಜುಗಳಿಗೆ ರಜೆ ಇರುವುದಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...