
ಬೆಂಗಳೂರು: ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದ್ದು, ನಿರಂತರವಾಗಿ ಧಾರಾಕಾರ ಮಳೆ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ.
ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕೋಲಾರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ನೀಡಲಾಗಿದೆ.
ತುಮಕೂರು ಜಿಲ್ಲೆಯಲ್ಲಿ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ರಾಮನಗರ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ.
ಮೈಸೂರು ಜಿಲ್ಲೆಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ.
ಹಾವೇರಿ ಜಿಲ್ಲೆಯಲ್ಲಿ ಮಳೆಯ ಕಾರಣ ನಾಳೆ ಶಾಲೆಗಳಿಗೆ ರಜೆ ನೀಡಲಾಗಿದೆ.
ಧಾರವಾಡ ಜಿಲ್ಲೆಯಲ್ಲಿಯೂ ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲಿ ನಾಳೆ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.