alex Certify BIG NEWS: ಇಂದಿನಿಂದ ಸಂಜೆವರೆಗೆ ಶಾಲೆ-ಕಾಲೇಜು; ಮನೆಯಿಂದಲೇ ಊಟ, ನೀರು ತನ್ನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಂದಿನಿಂದ ಸಂಜೆವರೆಗೆ ಶಾಲೆ-ಕಾಲೇಜು; ಮನೆಯಿಂದಲೇ ಊಟ, ನೀರು ತನ್ನಿ

ಬೆಂಗಳೂರು: ಇಂದಿನಿಂದ ಶಾಲೆ-ಕಾಲೇಜುಗಳು ಸಂಜೆವರೆಗೆ ನಡೆಯಲಿವೆ. ಕೊರೋನಾ ಕಾರಣದಿಂದ ಅರೆಕಾಲಿಕ ಅರೆಕಾಲಿಕ ತರಗತಿಗಳನ್ನು ನಡೆಸಲಾಗುತ್ತಿತ್ತು. ಜನವರಿ 1 ರಿಂದ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ-ಕಾಲೇಜುಗಳನ್ನು ಆರಂಭಿಸಿದೆ.

ಕೊರೋನಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಇಂದಿನಿಂದ 9 ಮತ್ತು ಪ್ರಥಮ ಪಿಯುಸಿ ತರಗತಿಗಳನ್ನು ಕೂಡ ಆರಂಭಿಸಲಾಗುತ್ತಿದೆ. ಇಂದಿನಿಂದ 9 ರಿಂದ 12 ನೇ ತರಗತಿಗಳಿಗೆ ಪೂರ್ಣಪ್ರಮಾಣದಲ್ಲಿ ಶಾಲೆ-ಕಾಲೇಜುಗಳು ನಡೆಯಲಿವೆ. ಪ್ರತಿದಿನ ಬೆಳಿಗ್ಗೆ 10 ರಿಂದ ಸಂಜೆ 4.30 ರವರೆಗೆ, ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12.30 ರವರೆಗೆ ಶಾಲೆ-ಕಾಲೇಜುಗಳಲ್ಲಿ ತರಗತಿ ನಡೆಯಲಿದ್ದು, ಹಾಜರಾಗಲು ಪೋಷಕರ ಒಪ್ಪಿಗೆ ಪತ್ರ ಕಡ್ಡಾಯವಾಗಿರುತ್ತದೆ. ವಿದ್ಯಾರ್ಥಿಗಳಿಗೆ ಬಿಸಿಯೂಟ ಇರುವುದಿಲ್ಲ. ಮನೆಯಿಂದಲೇ ಊಟ, ನೀರು ತರಬೇಕಿದೆ. 6 -8 ನೇ ತರಗತಿಯ ಮಕ್ಕಳಿಗೆ ವಿದ್ಯಾಗಮ ಕಲಿಕೆ ಮುಂದುವರೆಯಲಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...