alex Certify BIG NEWS: 10 ತಿಂಗಳಿಂದ ಮುಚ್ಚಿದ್ದ ಶಾಲೆ, ಕಾಲೇಜು ಶುಕ್ರವಾರದಿಂದಲೇ ಶುರು – ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 10 ತಿಂಗಳಿಂದ ಮುಚ್ಚಿದ್ದ ಶಾಲೆ, ಕಾಲೇಜು ಶುಕ್ರವಾರದಿಂದಲೇ ಶುರು – ಶಿಕ್ಷಣ ಇಲಾಖೆಯಿಂದ ಸಕಲ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ತಿಂಗಳಿಂದ ಮುಚ್ಚಿದ್ದ ಶಾಲೆಗಳು ಜನವರಿ 1 ರಿಂದ ಆರಂಭವಾಗಲಿವೆ. ಎಸ್.ಎಸ್.ಎಲ್.ಸಿ. ಮತ್ತು ಸೆಕೆಂಡ್ ಪಿಯುಸಿ ಹಾಗೂ ವಿದ್ಯಾಗಮ ತರಗತಿಗಳು ಜನವರಿ 1 ರ ಶುಕ್ರವಾರದಿಂದ ಶುರುವಾಗಲಿದೆ.

ಶಾಲೆ, ಕಾಲೇಜುಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದು, ಸರಳವಾಗಿ ಶಾಲೆ ಆರಂಭೋತ್ಸವ ನಡೆಸಲಾಗುವುದು. ಆರರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆ ಆವರಣದಲ್ಲಿ ವಿದ್ಯಾಗಮ ತರಗತಿಗಳು ನಡೆಯಲಿವೆ. ವೇಳಾಪಟ್ಟಿ, ಸಮಯದ ವಿಂಗಡಣೆ ಸೇರಿದಂತೆ ಎಲ್ಲಾ ಕಾರ್ಯಗಳನ್ನು ಶಿಕ್ಷಣ ಇಲಾಖೆ ಸಿದ್ಧಪಡಿಸಿಕೊಂಡಿದದೆ.

ಹೊಸ ರೂಪದ ಕೊರೊನಾ ಕಾರಣ ಮತ್ತೆ ಶಾಲೆ ಆರಂಭದ ಮೇಲೆ ಪರಿಣಾಮ ಬೀರಬಹುದು ಎಂದು ಹೇಳಲಾಗಿತ್ತು. ಆದರೆ, ಜನವರಿ 1 ರಿಂದಲೇ ಎಲ್ಲ ಸುರಕ್ಷತೆಗೆ ಮಾರ್ಗಸೂಚಿಗಳೊಂದಿಗೆ ಶಾಲೆಗಳನ್ನು ಆರಂಭಿಸಲು ನಿರ್ಧಾರ ಕೈಗೊಳ್ಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...