ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಸೆಕೆಂಡ್ ಪಿಯುಸಿ ತರಗತಿಗಳನ್ನು ಆರಂಭಿಸುವ ಕುರಿತು ಆರೋಗ್ಯ ಇಲಾಖೆಯ ತಜ್ಞರ ಸಮಿತಿಗೆ ಚರ್ಚೆ ನಡೆಸಲಾಗುವುದು. ನಂತರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ತರಗತಿಗಳನ್ನು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಖಾಸಗಿ ಅನುದಾನರಹಿತ ಪದವಿಪೂರ್ವ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಸಚಿವರು, ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಸುರಕ್ಷತಾ ಕ್ರಮಗಳೊಂದಿಗೆ ಶಾಲಾ, ಕಾಲೇಜು ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.