ಬೆಂಗಳೂರು: ಸಾಮಾಜಿಕ ಜಾಲತಾಣಗಳು ಮತ್ತು ಆನ್ಲೈನ್ ಸುರಕ್ಷತೆ ಬಗ್ಗೆ ರಾಜ್ಯದ ಶಾಲಾ, ಕಾಲೇಜುಗಳಲ್ಲಿ ತರಬೇತಿ ನೀಡಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಡಿಜಿಟಲ್ ನಾಗರಿಕ ಮತ್ತು ಎಆರ್ -ವಿಆರ್ ಕೌಶಲ್ಯ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ರಾಜ್ಯದ ಶಾಲಾ-ಕಾಲೇಜುಗಳ ಒಂದು ಲಕ್ಷ ಬೋಧಕರು ಮತ್ತು 10 ಲಕ್ಷ ವಿದ್ಯಾರ್ಥಿಗಳಿಗೆ ಮೆಟಾ ಸಹಯೋಗದಲ್ಲಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಹೆಚ್ಚುತ್ತಿರುವ ಜಾಲತಾಣಗಳ ದುರ್ಬಳಕೆ ತಡೆ, ಆನ್ಲೈನ್ ನಲ್ಲಿ ವೈಯಕ್ತಿಕ ಮಾಹಿತಿ ಸುರಕ್ಷತೆ ಮತ್ತು ರಕ್ಷಣೆ, ಪಾಸ್ವರ್ಡ್ ರೂಪಿಸುವುದು, ಮೋಸದ ಜಾಲಗಳನ್ನು ಪತ್ತೆ ಹಚ್ಚುವ ಕುರಿತಾಗಿ ಶಾಲಾ ಶಿಕ್ಷಣ, ಉನ್ನತ ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಗಳ ಸಹಕಾರದೊಂದಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದ್ದಾರೆ.