
ಬೆಂಗಳೂರು: ಕೊರೋನಾ ಮೂರನೇ ಅಲೆ ಭೀತಿ ನಡುವೆ ಶಾಲೆ ಆರಂಭಿಸಬೇಕೇ ಬೇಡವೇ ಎಂಬ ಕುರಿತು ತಜ್ಞರ ವರದಿ ಆಧರಿಸಿ ಸರ್ಕಾರ ಕ್ರಮ ಕೈಗೊಳ್ಳಲು ಮುಂದಾಗಿದೆ.
ಸಿಎಂ ಯಡಿಯೂರಪ್ಪ ಅವರು, ಸದ್ಯಕ್ಕೆ ಶಾಲೆಗಳನ್ನು ಆರಂಭಿಸುವುದಿಲ್ಲ. ಹಂತ ಹಂತವಾಗಿ ಶಾಲೆಗಳನ್ನು ಆರಂಭಿಸುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ಶಾಲೆಗಳನ್ನು ಪುನರಾರಂಭ ಮಾಡಬೇಕೆಂಬ ಸಲಹೆ, ಒತ್ತಾಯವೂ ಕೇಳಿ ಬಂದಿದೆ. ಶಾಲೆಗಳು ಸೋಂಕಿನ ತಾಣಗಳಾಗುತ್ತವೆ ಎನ್ನುವುದು ಸಾಬೀತಾಗಿಲ್ಲ. ಮಕ್ಕಳ ಮಾನಸಿಕ ಮತ್ತು ದೈಹಿಕ ಆರೋಗ್ಯದ ಹಿತದೃಷ್ಟಿಯಿಂದ ಶಾಲೆ ಆರಂಭಿಸಬೇಕು. ಇಲ್ಲದಿದ್ದರೆ ಅಪೌಷ್ಟಿಕತೆ, ಬಾಲಕಾರ್ಮಿಕರು, ಬಾಲ್ಯವಿವಾಹ, ಮಕ್ಕಳ ಕಳ್ಳ ಸಾಗಣೆ ಮೊದಲಾದ ಸಮಸ್ಯೆಗಳಾಬಹುದು ಎನ್ನಲಾಗಿದೆ.
ಪೋಷಕರು, ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ನೀಡಿ ಶಾಲೆ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಸಲಹೆ ನೀಡಲಾಗಿದೆ. ರಾಜ್ಯದ ಎಲ್ಲಾ ಶಾಲಾ, ಕಾಲೇಜುಗಳಿಗೆ ಭೌತಿಕವಾಗಿ ಹಾಜರಾಗುವ ಮಕ್ಕಳಿಗೆ 2 ಲಕ್ಷ ರೂ. ಮಾಡಿಸುವಂತೆ ತಜ್ಞರ ಸಮಿತಿ ಶಿಫಾರಸು ಮಾಡಿದೆ.
ಲಸಿಕೆ ನೀಡುವ ಮೂಲಕ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಉನ್ನತ ಶಿಕ್ಷಣ ಕಾಲೇಜುಗಳನ್ನು ಆರಂಭಿಸುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಆದರೆ, ಸದ್ಯಕ್ಕೆ ಒಂದರಿಂದ ಹತ್ತನೇ ತರಗತಿ ಶಾಲೆಗಳನ್ನು ಆರಂಭಿಸುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದು ಹೇಳಲಾಗಿದೆ.