alex Certify ಕೊರೋನಾ ಹೆಚ್ಚಳ: ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್: ಉಳಿದೆಡೆ ಯಥಾಸ್ಥಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಹೆಚ್ಚಳ: ಕೆಲವು ಜಿಲ್ಲೆಗಳಲ್ಲಿ ಶಾಲೆ ಬಂದ್: ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕು ತೀವ್ರ ಏರಿಕೆ ಕಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.

ಬೆಳಗಾವಿಯಲ್ಲಿ ಜನವರಿ 16 ರವರೆಗೆ 1 ರಿಂದ 9ನೇ ತರಗತಿಗೆ ಭೌತಿಕ ತರಗತಿ ಬಂದ್ ಮಾಡಲಾಗಿದೆ.

ಮೈಸೂರು ನಗರ ಮತ್ತು ಮೈಸೂರು ತಾಲೂಕಿನಲ್ಲಿ 1 ರಿಂದ 9ನೇ ತರಗತಿಗಳನ್ನು ಬಂದ್ ಮಾಡಲಾಗಿದೆ.

ಜ.13 ರಿಂದ ಧಾರವಾಡ ನಗರ ಹಾಗೂ ಗ್ರಾಮೀಣ ಮತ್ತು ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ತಾಲೂಕಿನಾದ್ಯಂತ 1 ರಿಂದ 8 ರ ವರೆಗಿನ ಭೌತಿಕ ತರಗತಿಗಳನ್ನು ಬಂದ್ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕೋವಿಡ್-19 ವೈರಾಣುವಿನ ಹರಡುವಿಕೆಯನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವಾಗಿ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲೆಯ ಧಾರವಾಡ ನಗರ ಮತ್ತು ಗ್ರಾಮೀಣ ಹಾಗೂ ಹುಬ್ಬಳ್ಳಿ ನಗರ ಮತ್ತು ಗ್ರಾಮೀಣ ತಾಲೂಕಿನಾದ್ಯಂತ ಭೌತಿಕ ತರಗತಿಗಳು, ವಸತಿ ಶಾಲೆಗಳು ಹಾಗೂ ಅಂಗನವಾಡಿ ಕೇಂದ್ರಗಳನ್ನೊಳಗೊಂಡು ಎಲ್ಲಾ ಮಾಧ್ಯಮದ 1 ರಿಂದ 8ನೇ ತರಗತಿವರೆಗಿನ ಶಾಲೆಗಳನ್ನು ಜ.13 ರಿಂದ ಮುಂದಿನ ಆದೇಶದವರೆಗೆ ತೆರೆಯದಂತೆ ನಿರ್ದೇಶಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ರಿಂದ 9 ನೇ ತರಗತಿಗಳನ್ನು ಜನವರಿ 31 ರವರೆಗೆ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಜಿಲ್ಲೆಗಳಲ್ಲಿ ಕೊರೋನಾ ಸೋಂಕು ಹೆಚ್ಚಾದರೆ ಜಿಲ್ಲಾಧಿಕಾರಿಗಳು ಆಯಾ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ ಎನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...