ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ 5 ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನ ರಜೆ ನೀಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕಳಸ, ಎನ್.ಆರ್. ಪುರ, ಕೊಪ್ಪ ತಾಲೂಕಿನ ಶಾಲೆಗಳಿಗೆ ಡಿಸಿ ರಮೇಶ್ ರಜೆ ಘೋಷಿಸಿದ್ದಾರೆ. ಚಿಕ್ಕಮಗಳೂರು ತಾಲೂಕಿನ ಲಕ್ಯಾ, ಅಂಬಳೆ ಹೋಬಳಿಯಲ್ಲಿ ರಜೆ ಇರುವುದಿಲ್ಲ ಇವೆರಡು ಹೋಬಳಿ ಹೊರತುಪಡಿಸಿ ಚಿಕ್ಕಮಗಳೂರು ತಾಲೂಕಿನ ಉಳಿದೆಡೆ ರಜೆ ಇರಲಿದೆ. ನಾಳೆಯಿಂದ ಜುಲೈ 9ರವರೆಗೆ ರಜೆ ನೀಡಲಾಗಿದೆ ಎನ್ನಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು, ನಾಳೆಯೂ ಶಾಲೆ- ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಕೂರ್ಮಾರಾವ್ ಅವರು ನಾಳೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ನಾಳೆಯೂ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ. ಕೊಡಗು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ್ ಆದೇಶ ಹೊರಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ.