alex Certify ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಮಹತ್ವದ ಕ್ರಮ: ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿಯನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.

ತಹಸಿಲ್ದಾರ್, ತಾಲೂಕು ಪಂಚಾಯಿತಿ ಇಒ, ಬಿಇಒ, ಕಾರ್ಯಪಾಲಕ ಇಂಜಿನಿಯರ್, ಹೆಚ್ಚು ದಾಖಲಾತಿ ಹೊಂದಿರುವ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರು, ಪಿಯು ಕಾಲೇಜಿನ ಪ್ರಾಂಶುಪಾಲರು, ಡಯಟ್ ನ ಒಬ್ಬ ಹಿರಿಯ ಉಪನ್ಯಾಸಕರು, ಇಬ್ಬರು ಎಸ್.ಡಿ.ಎಂ.ಸಿ. ಸದಸ್ಯರು, ಸರ್ಕಾರದಿಂದ ಅನುಮೋದಿತ ಐವರು ನಾಮ ನಿರ್ದೇಶಿತ ಸದಸ್ಯರು ಈ ಸಮಿತಿಯಲ್ಲಿ ಇರುತ್ತಾರೆ.

ಮಕ್ಕಳ ದಾಖಲಾತಿ, ನಿರಂತರ ಹಾಜರಾತಿ, ಕಲಿಕೆ ವೃದ್ಧಿಗೆ ಈ ಸಮಿತಿ ಕ್ರಮ ಕೈಗೊಳ್ಳಲಿದೆ. ಮಕ್ಕಳು ಶಾಲೆ ಬಿಡದಂತೆ ಮತ್ತು ಶಾಲೆ ಬಿಟ್ಟ ಮಕ್ಕಳನ್ನು ವಾಪಸ್ ಕರೆತರಲು ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಿದೆ.

ಸಮುದಾಯ ಮತ್ತು ಸಿ.ಎಸ್.ಆರ್. ನಿಧಿ ಮೂಲಕ ತಾಲೂಕಿನ ಶೈಕ್ಷಣಿಕ ಪ್ರಗತಿಗೆ ನೆರವಾಗಲು ಕ್ರಮ ಕೈಗೊಳ್ಳಲಾಗುವುದು. ಶಾಲಾ ಶಿಕ್ಷಣ ಇಲಾಖೆ ಸುಧಾರಣೆಗೆ ಕೆಡಿಪಿ ಸಭೆಯಲ್ಲಿ ಮಾತ್ರ ಚರ್ಚೆ ನಡೆಯುತ್ತಿತ್ತು. ಸಮಯದ ಅಭಾವದ ಕಾರಣ ಪ್ರಗತಿ ಪರಿಶೀಲನೆ ಪರಿಣಾಮಕಾರಿಯಾಗಿ ನಡೆಯುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ತಾಲೂಕು ಮಟ್ಟದ ಶಿಕ್ಷಣ ಸುಧಾರಣಾ ಸಮಿತಿ ರಚಿಸಲಾಗಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...