alex Certify ಮಾ. 11 ರಿಂದ 5, 8 ಮತ್ತು 9ನೇ ತರಗತಿ ‘ಮೌಲ್ಯಾಂಕನ ಪರೀಕ್ಷೆ : ‘ಶಾಲಾ ಶಿಕ್ಷಣ ಇಲಾಖೆ’ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾ. 11 ರಿಂದ 5, 8 ಮತ್ತು 9ನೇ ತರಗತಿ ‘ಮೌಲ್ಯಾಂಕನ ಪರೀಕ್ಷೆ : ‘ಶಾಲಾ ಶಿಕ್ಷಣ ಇಲಾಖೆ’ ಆದೇಶ

ಬೆಂಗಳೂರು : 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ: 11.03.2024 ರಿಂದ ಮೌಲ್ಯಾಂಕನವನ್ನು ನಡೆಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗುತ್ತಿದೆ.

ಸದರಿ ಮೌಲ್ಯಾಂಕನವನ್ನು ಹೈ ಕೋರ್ಟ್ ಏಕಸದಸ್ಯ ಪೀಠವು ರದ್ದುಪಡಿಸಿ ನೀಡಿದ್ದ ತೀರ್ಪಿಗೆ ವಿಭಾಗೀಯ ಪೀಠವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಅದರಂತೆ ಉಲ್ಲೇಖ (3) ರ ನಿಗದಿತ ವೇಳಾಪಟ್ಟಿಯಂತೆ 5ನೇ ತರಗತಿಯ ವಿದ್ಯಾರ್ಥಿಗಳಿಗೆ ದಿನಾಂಕ: 11.03.2024 ರಿಂದ 14.03.2024 ರವರೆಗೆ ಹಾಗೂ 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ದಿನಾಂಕ: 11.03.2024 ರಿಂದ 18.03.2024 ರವರೆಗೆ ಮೌಲ್ಯಾಂಕನವನ್ನು ವ್ಯವಸ್ಥಿತವಾಗಿ ಕೈಗೊಳ್ಳಲು ಈ ಮೂಲಕ ತಿಳಿಸಿದೆ. ಇನ್ನುಳಿದಂತೆ ಉಲ್ಲೇಖ (2) ರ ಈ ಕಛೇರಿ ಮಾರ್ಗಸೂಚಿಯನ್ವಯ ಕ್ರಮವಹಿಸುವುದು.

ಉಲ್ಲೇಖ(2) ರ ಸುತ್ತೋಲೆಯಲ್ಲಿ ರಾಜ್ಯ ಕಛೇರಿಯಿಂದ ಪ್ರಶ್ನೆಪತ್ರಿಕೆಗಳನ್ನು ಮಾತ್ರ ಒದಗಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಉತ್ತರಿಸಬೇಕಾದ ಹಾಳೆಗಳೊಂದಿಗೆ ಮೌಲ್ಯಾಂಕನಕ್ಕೆ ಹಾಜರಾಗುವಂತೆ ಶಾಲೆಗಳ ಮುಖ್ಯ ಶಿಕ್ಷಕರು/ಪ್ರಾಂಶುಪಾಲರುಗಳಿಗೆ ತಿಳಿಸಲಾಗಿತ್ತು. ಆದರೆ ಪ್ರಸ್ತುತ ಉತ್ತರಿಸುವ ಹಾಳೆಗಳಿಗೆ ಆಗತ್ಯವಿರುವ ಅನುದಾನವನ್ನು ಮಂಡಲಿಯಿಂದಲೇ ಭರಿಸಲಾಗುತ್ತಿದ್ದು, ಮೌಲ್ಯಾಂಕನಕ್ಕೆ ಹಾಜರಾಗುವ ಪ್ರತಿ ವಿದ್ಯಾರ್ಥಿಗೆ 4 ಪುಟಗಳ ಒಂದು ಹಾಳೆಗೆ ಅಂದಾಜು 1/- ರೂ ತಗಲುವಂತೆ ವಿದ್ಯಾರ್ಥಿಗಳಿಗೆ ಉತ್ತರಿಸುವ ಹಾಳೆಗಳನ್ನು ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ಶಾಲಾ ಹಂತದಿಂದ ಒದಗಿಸುವುದು. 5ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ವಿಷಯಕ್ಕೆ ಗರಿಷ್ಠ 4 ಪುಟಗಳ 1 ಹಾಳೆ. 8ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವಿಷಯಕ್ಕೆ ಗರಿಷ್ಠ 4 ಪುಟಗಳ 2 ಹಾಳೆ ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ವಿಷಯಕ್ಕೆ ಗರಿಷ್ಠ 4 ಪುಟಗಳ 3 ಹಾಳೆ ಮೀರದಂತೆ ತಗಲುವ

ಅಂದಾಜು ವೆಚ್ಚವನ್ನು ಮಂಡಲಿಯಿಂದ ಭರಿಸಲಾಗುವುದು. ಈ ಎಲ್ಲಾ ಅಂಶಗಳನ್ನು ಉಪನಿರ್ದೇಶಕರು(ಆಡಳಿತ) ಮತ್ತು ಕ್ಷೇತ್ರಶಿಕ್ಷಣಾಧಿಕಾರಿಗಳು ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಎಲ್ಲಾ ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರಿಗೆ ತಿಳಿಸುವುದು ಹಾಗೂ ಈ ಸಂಬಂಧ ಸೂಕ್ತ ಕ್ರಮವಹಿಸಲು ತಿಳಿಸಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...