ಬೆಂಗಳೂರು: ಶಾಲೆಗಳಲ್ಲಿಯೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆಯ ಒಂದೊಂದು ಶಾಲೆಗಳಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿ ಹಾಜರಾತಿ ಪಡೆಯಲಾಗಿದೆ. ಈ ವೇಳೆ ಯಾವುದೇ ತಾಂತ್ರಿಕ ದೋಷಗಳಿಲ್ಲದೆ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಪ್ರಯೋಗ ಯಶಸ್ವಿಯಾಗಿದೆ.
ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಯೋಜನಾ ವರದಿ ಸಿದ್ದಪಡಿಸಿದೆ. ಮುಂದಿನ ಹಂತದ ಸಿದ್ಧತೆ ಪೂರ್ಣಗೊಳಿಸಿ ಎಲ್ಲಾ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎನ್ನಲಾಗಿದೆ.