ಬೆಂಗಳೂರು: ಖಾಸಗಿ ಶಾಲೆ ಶುಲ್ಕದಲ್ಲಿ ಶೇಕಡ 35 ರಷ್ಟು ಕಡಿತ ಮಾಡಲು ಶೀಘ್ರದಲ್ಲೇ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಶುಲ್ಕ ನಿಗದಿಗೆ ಸಂಬಂಧಿಸಿದಂತೆ ಸರ್ಕಾರ ಸರ್ಕಾರಕ್ಕೆ ಶಿಕ್ಷಣ ಇಲಾಖೆಯಿಂದ ವರದಿ ಸಲ್ಲಿಸಲಾಗಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟದಲ್ಲಿರುವ ಪೋಷಕರಿಗೆ ಅನುಕೂಲವಾಗುವಂತೆ ಈ ಶೈಕ್ಷಣಿಕ ಸಾಲಿನಲ್ಲಿ ಖಾಸಗಿ ಶಾಲೆಗಳಲ್ಲಿ ಶುಲ್ಕ ಕಡಿತಕ್ಕೆ ಸರ್ಕಾರ ತೀರ್ಮಾನಿಸಿದೆ. ಶೇಕಡ 35 ರಷ್ಟು ಶುಲ್ಕ ಕಡಿತಗೊಳಿಸುವ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.