ದಾವಣಗೆರೆ: ರಾತ್ರಿ ಊಟ ಸೇವಿಸಿದ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾದ ಘಟನೆ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಡೆದಿದೆ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಅರಬಗಟ್ಟೆ ಗ್ರಾಮದಲ್ಲಿರುವ ಇಂದಿರಾ ಗಾಂಧಿ ವಸತಿ ಶಾಲೆಯ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ರಾತ್ರಿ ಊಟ ಸೇವನೆಯ ಬಳಿಕ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾದ ವಿದ್ಯಾರ್ಥಿಗಳಿಗೆ ಹೊನ್ನಾಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು ಶಾಸಕ ರೇಣುಕಾಚಾರ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಸ್ವಸ್ಥರಾದ ಮಕ್ಕಳ ಆರೋಗ್ಯವನ್ನು ವಿಚಾರಿಸಿದ್ದಾರೆ.
ಫುಡ್ ಪಾಯ್ಸನ್ ನಿಂದ ಈ ರೀತಿ ಆಗಿದೆ ಎನ್ನಲಾಗಿದ್ದು, ವಸತಿ ಶಾಲೆಗೆ ಮತ್ತು ಆಸ್ಪತ್ರೆಗೆ ಭೇಟಿ ನೀಡಿದ ರೇಣುಕಾಚಾರ್ಯ ಮಕ್ಕಳ ಆರೋಗ್ಯ ವಿಚಾರಿಸಿ ಸೂಕ್ತ ಚಿಕಿತ್ಸೆ, ವ್ಯವಸ್ಥೆ ಕಲ್ಪಿಸಲು ವೈದ್ಯರು, ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.