
ತುಮಕೂರು: ತುಮಕೂರು ಜಿಲ್ಲೆ, ಶಿರಾ ಪಟ್ಟಣದ ಖಾಸಗಿ ವಸತಿ ಶಾಲೆಯಲ್ಲಿ ಊಟ ಮಾಡಿದ್ದ 40 ಮಕ್ಕಳು ಅಸ್ವಸ್ಥರಾಗಿದ್ದಾರೆ.
ಹಾಸ್ಟೆಲ್ ನಲ್ಲಿ ಊಟ ಮಾಡಿದ 30 ರಿಂದ 40 ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವನೆಯಿಂದ ಅಸ್ವಸ್ಥರಾಗಿದ್ದು, ಅವರನ್ನು ಶಿರಾ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರಾದ ಪ್ರೆಸಿಡೆನ್ಸಿ ಖಾಸಗಿ ವಸತಿ ಶಾಲೆಯ ಹಾಸ್ಟೆಲ್ ನಲ್ಲಿ ಘಟನೆ ನಡೆದಿದೆ. ಊಟ ಮಾಡಿದ ವಿದ್ಯಾರ್ಥಿಗಳು ತಾಲೂಕು ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಬಳಿಕ ಚೇತರಿಸಿಕೊಂಡಿದ್ದಾರೆ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.