alex Certify SHOCKING NEWS: 9ನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: 9ನೇ ತರಗತಿ ವಿದ್ಯಾರ್ಥಿನಿಯನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು

ರಾಯಚೂರು: ಶಾಲೆಯಿಂದ ಬರುತ್ತಿದ್ದ 9ನೇ ತರಗತಿ ವಿದ್ಯಾರ್ಥಿನಿಯನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ಮಸ್ಕಿ ಪಟ್ಟಣದ ಸಾನಬಾಳ ರಸ್ತೆಯಲ್ಲಿ ನಡೆದಿದೆ.

15 ವರ್ಷದ ಭೂಮಿಕಾ ಹತ್ಯೆಯಾದ 9ನೇ ತರಗತಿ ವಿದ್ಯಾರ್ಥಿನಿ. ಖಾಸಗಿ ಹೈಸ್ಕೂಲಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಮನೆಗೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಅಡ್ಡಗಟ್ಟಿದ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದಿದ್ದಾರೆ.

ಭೂಮಿಕಾ ಹೊಟ್ಟೆಯ ಭಾಗಕ್ಕೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಸ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...