ಬೆಂಗಳೂರು: ಶಾಲೆಗಳನ್ನು ಆರಂಭಿಸಲು ಖಾಸಗಿ ಶಿಕ್ಷಣ ಸಂಸ್ಥೆಗಳು ಹಿಂದೇಟು ಹಾಕಿದ್ದು, ಸರ್ಕಾರ ಜವಾಬ್ದಾರಿ ವಹಿಸಿಕೊಂಡರೆ 9 ರಿಂದ 12 ನೇ ತರಗತಿವರೆಗೆ ಶಾಲೆ ಆರಂಭಿಸಲಾಗುವುದು. ಇಲ್ಲವಾದರೆ, ಕೊರೋನಾ ಮುಗಿಯುವವರೆಗೆ ಶಾಲೆ ಆರಂಭಿಸುವುದು ಬೇಡವೆಂದು ಹೇಳಲಾಗಿದೆ.
ಶಿಕ್ಷಣ ಇಲಾಖೆ ಆಯುಕ್ತರ ಸಭೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು, ಶಾಲೆಗಳು ಆರಂಭಿಸಲು ಹಿಂದೇಟು ಹಾಕಿದ್ದು, ಎಲ್ಲ ಜವಾಬ್ದಾರಿ ಸರ್ಕಾರ ವಹಿಸಿಕೊಂಡರೆ ಮಾತ್ರ 9 ರಿಂದ 12 ನೇ ತರಗತಿ ಆರಂಭಿಸಬಹುದು. ಶಿಕ್ಷಣ ಸಂಸ್ಥೆಗಳೇ ಜವಾಬ್ದಾರಿ ವಹಿಸಿಕೊಳ್ಳುವುದಾದರೆ ಶಾಲೆ ತೆರೆಯುವುದಿಲ್ಲ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರಕ್ಕೆ ತಿಳಿಸಿವೆ.
ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿಗೆ ಉಚಿತ ಕೋವಿಡ್ ಪರೀಕ್ಷೆ ನಡೆಸಬೇಕು. ದಿನ ಬಿಟ್ಟು ದಿನ ತರಗತಿ ನಡೆಸಲು ಸಮಗ್ರ ಮಾರ್ಗಸೂಚಿ ರೂಪಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮುಂದಿಟ್ಟಿದ್ದು ಸರ್ಕಾರ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.