ಬೆಂಗಳೂರು: ತರಾತುರಿಯಲ್ಲಿ ಶಾಲೆ ಆರಂಭ ಮಾಡಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಲೇಜು ಆರಂಭಿಸಿದರೂ ವಿದ್ಯಾರ್ಥಿಗಳು ಬರುತ್ತಿಲ್ಲ. ಶಾಲೆ ಆರಂಭದ ಬಗ್ಗೆ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಸಲಹೆ ನೀಡಿದ್ದಾರೆ.
ಶಾಲೆ ಆರಂಭದ ಕುರಿತಾಗಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದು, ಶಾಲೆ ಆರಂಭ ಮಾಡಿದರೆ ಕೊರೋನಾ ಸೋಂಕು ಹೆಚ್ಚಾಗಬಹುದು. ಅನೇಕ ರಾಜ್ಯಗಳಲ್ಲಿ ಅಂತಹ ಪರಿಸ್ಥಿತಿ ಎದುರಾಗಿದೆ. ಹಾಗಾಗಿ, ತಜ್ಞರ ಸಲಹೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು. ಮಕ್ಕಳ ಜೀವ ರಕ್ಷಣೆ ಗಮನಿಸಿ ನಿರ್ಧಾರ ಕೈಕೈಗೊಳ್ಳಬೇಕು. ತರಾತುರಿಯಲ್ಲಿ ಶಾಲೆ ಆರಂಭಿಸಬಾರದು ಎಂದು ಹೇಳಿದ್ದಾರೆ.