ಕೊಪ್ಪಳ: ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅಡುಗೆ ಸಹಾಯಕನನ್ನು ಕಾರಟಗಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಲಿಂಗರಾಜ ನಾಗಿರೆಡ್ಡಿ ಬಂಧಿತ ಆರೋಪಿ. ಈತ ಕೊಪ್ಪಳ ಜಿಲ್ಲೆಯ ವಸತಿ ಶಾಲೆಯೊಂದರಲ್ಲಿ ಅಡುಗೆ ಸಹಾಯಕನಾಗಿ ಕಾರ್ಯನಿರ್ವಹಿಸುತ್ತಿದ್ದು, ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸುತ್ತಿದ್ದ ಎನ್ನಲಾಗಿದೆ.
ಲಿಂಗರಾಜನ ವಿರುದ್ಧ ವಿದ್ಯಾರ್ಥಿನಿಯರು ವಸತಿ ಶಾಲೆಯ ಪ್ರಭಾರ ಪ್ರಾಚಾರ್ಯರಿಗೆ ದೂರು ನೀಡಿದ್ದು, ಅವರ ದೂರು ಆಧರಿಸಿ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.