
ಹಾಸನ ಜಿಲ್ಲೆಯಲ್ಲಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಲಾಗಿದೆ. ಆಗಸ್ಟ್ 30 ರಿಂದ 9, 10ನೇ ತರಗತಿ ಆರಂಭಿಸಲು ಜಿಲ್ಲಾಧಿಕಾರಿ ಅನುಮತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆಯಾಗಿರುವ ಹಿನ್ನಲೆಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ಅರ್ಧದಿನ ಭೌತಿಕ ತರಗತಿ ನಡೆಯಲಿವೆ. ಬೆಳಗ್ಗೆ 10 ರಿಂದ ಮಧ್ಯಾಹ್ನ 1.30 ರವರೆಗೆ ತರಗತಿ ನಡೆಯಲಿವೆ.
ಶನಿವಾರ ಬೆಳಗ್ಗೆ 10 ರಿಂದ ಮಧ್ಯಾಹ್ನ 12.50 ರವರೆಗೆ ತರಗತಿಗಳು ನಡೆಯಲಿದ್ದು, ಮಕ್ಕಳು ಶಾಲೆಗೆ ಬರಲು ಪೋಷಕರ ಅನುಮತಿ ಪತ್ರ ಕಡ್ಡಾಯವಾಗಿರುತ್ತದೆ ಎಂದು ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.